‘ರಾಮಾಯಣ’ಕ್ಕೆ ರಾಕಿಭಾಯ್ ಪ್ರೊಡ್ಯೂಸರ್ ಮಾತ್ರ ʼರಾವಣʼ ಅಲ್ಲ…! ಕ್ಲಾರಿಟಿ ಕೊಟ್ಟ ನಟ
Yash in Ramayana : ಬಹುನಿರೀಕ್ಷಿತ ರಾಮಾಯಣ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದ್ದು, ಭಾರತೀಯ ಪುರಾಣದ ಕಥೆಯನ್ನು ತೆರೆದಿಡುವ ಭವ್ಯ ಕತೆಯನ್ನು ತೆರೆ ಮೇಲೆ ತರಲು ರಾಕಿಂಗ್ ಸ್ಟಾರ್ ಯಶ್ ಹಾಗೂ ನಮಿತ್ ಮಲ್ಹೋತ್ರಾ ಕೈ ಜೋಡಿಸಿದ್ದಾರೆ.
ಹೌದು.. ʼರಾಮಾಯಣʼಕ್ಕೆ ರಾಕಿಭಾಯ್ (Yash in Ramayana movie ) ನಿರ್ಮಾಪಕರಾಗಿದ್ದಾರೆ. ಈ ಸಿನಿಮಾವನ್ನು ಬಹಳ ಅದ್ಧೂರಿಯಾಗಿ ದೃಶ್ಯ ರೂಪಕ್ಕೆ ತರಲು ಸಿದ್ಧರಾಗಿರುವ ದಂಗಲ್ ನಿರ್ದೇಶಕ ನಿತೀಶ್ ತಿವಾರಿಗೆ (Nitesh tiwari) ಯಶ್ ಸಾಥ್ ನೀಡುತ್ತಿದ್ದಾರೆ. ಅದರಂತೆ ಬಹು ಕೋಟಿ ಬಜೆಟ್ ಹಾಕಿ ಈ ಚಿತ್ರ ನಿರ್ಮಾಣ ಮಾಡಲು ರಾಕಿಭಾಯ್ ಹಾಗೂ ನಮಿತ್ ಮಲ್ಹೋತ್ರಾ ಒಂದಾಗಿದ್ದಾರೆ. ಯಶ್ ಒಡೆತನದ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ ಹಾಗೂ ನಮಿತ್ ಮಲ್ಹೋತ್ರಾ ಸಾರಥ್ಯದ ಪ್ರೈಮ್ ಫೋಕಸ್ ಸ್ಟುಡಿಯೋ ಬ್ಯಾನರ್ ಅಡಿಯಲ್ಲಿ ರಾಮಾಯಣ ಸಿನಿಮಾ ನಿರ್ಮಾಣವಾಗಲಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ನಮಿತ್ ಮಲ್ಹೋತ್ರಾ, ರಾಮಾಯಣ ಕಥೆಗೆ ನ್ಯಾಯ ಸಲ್ಲಿಸಲು ನಾನು ಸಿದ್ಧನಾಗಿದ್ದೇನೆ. ನಮ್ಮ ಸಂಸ್ಕ್ರತಿಯನ್ನು ಜಗತ್ತಿಗೆ ಪರಿಚಯಿಸಲು ನಾನು ಉತ್ಸಕನಾಗಿದ್ದು, ನಾನು ಯಶ್ ಅವರಲ್ಲಿಯೂ ಇದನ್ನು ಕಂಡುಕೊಂಡಿದ್ದೇನೆ. ಅವರ ಪಯಣದಿಂದ ನಾನು ಸ್ಪೂರ್ತಿ ಪಡೆದಿದ್ದೇನೆ. ಯಶ್ ಅವರಲ್ಲಿರುವ ಯೋಜನೆಯನ್ನು ಅರಿತುಕೊಂಡಿದ್ದೇನೆ. ರಾಮಾಯಣ ದೃಶ್ಯಕಾವ್ಯವನ್ನು ತೆರೆಗೆ ತರುತ್ತಿದ್ದೇವೆ ಎಂದರು.
ಯಶ್ ಮಾತನಾಡಿ, ಭಾರತೀಯ ಸಿನಿಮಾವನ್ನು ಜಾಗತಿಕ ಮಟ್ಟದಲ್ಲಿ ಪ್ರರ್ದಶಿಸುವುದು ನನ್ನ ಬಹುದಿನಗಳ ಕನಸು. ಅದರ ಹುಡುಗಾಟದಲ್ಲಿ ನಾನು ಅತ್ಯುತ್ತಮ VFC ಸ್ಟುಡಿಯೋ ಕಂಡುಕೊಂಡಿದ್ದೇನೆ. ಅದರ ಹಿಂದಿನ ಪ್ರೇರಕ ಶಕ್ತಿ ಒಬ್ನ ಭಾರತೀಯ. ನಾವು ಸಿನಿಮಾ ರಂಗದ ಬೇರೆ ವಿಷಯಗಳ ಬಗ್ಗೆ ಚರ್ಚೆ ನಡೆಸುವಾಗ ರಾಮಾಯಣ ವಿಷಯವು ಬಂದಿತು. ಭಾರತೀಯ ಸಂಸ್ಕೃತಿಯನ್ನು ಜಗತ್ತಿಗೆ ಪ್ರಸ್ತುತಪಡಿಸುವ ಸಿನಿಮಾ ಇದಾಗಿದ್ದು, ಈ ಮಹಾಕಾವ್ಯ ಸಿನಿಮಾ ರೂಪ ತಾಳುತ್ತಿದೆ. ಆ ಅತ್ಯುತ್ತಮ ಅನುಭವನ್ನು ಜಗತ್ತಿಗೆ ನೀಡಲು ನಾವು ಕಾತರರಾಗಿದ್ದೇವೆ ಎಂದರು.
ಯಶ್ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ ಸಂಸ್ಥೆಯನ್ನು ಹೊಂದಿದ್ದಾರೆ. ಈ ಬ್ಯಾನರ್ ನಡಿ ‘ಟಾಕ್ಸಿಕ್’ ಸಿನಿಮಾವನ್ನು ಸಹ ನಿರ್ಮಾಣ ಮಾಡುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಜೊತೆಗೆ ‘ಮಾನ್ಸ್ಟರ್ ಮೈಂಡ್’ ಕ್ರಿಯೇಷನ್ಸ್ ಕೂಡ ‘ಟಾಕ್ಸಿಕ್’ ಸಿನಿಮಾದ ನಿರ್ಮಾಣದಲ್ಲಿ ಪಾಲುದಾರಿಕೆಯನ್ನು ಹೊಂದಿದೆ. ಇದೀಗ ಇದೇ ಬ್ಯಾನರ್ ಅಡಿಯಲ್ಲಿ ರಾಮಾಯಣ ಸಿನಿಮಾ ನಿರ್ಮಾಣಕ್ಕೆ ಯಶ್ ಮುಂದಾಗಿದ್ದಾರೆ.
ಸಿನಿಮಾ ಸುದ್ದಿಗಳು, ಲೆಟೆಸ್ಟ್ ಅಪ್ಡೆಟ್ಸ್ಗಾಗಿ ಈಗಲೇ ನಮ್ಮ Movie Magic ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಿ
Facebook Link – http://surl.li/sinyi
Instagram Link – http://surl.li/sinyq
WhatsApp Channel- http://surl.li/sinza
Share this content:
Post Comment