Loading Now

ಮಂದೆ ಕೆಲಸ ಆಗಿಲ್ಲ ಅಂದ್ರೆ ಪ್ರಶ್ನೆ ಮಾಡೋಕೆ ಇಂದು ವೋಟ್ ಹಾಕಿ: ನಟ ಗಣೇಶ್

ಮಂದೆ ಕೆಲಸ ಆಗಿಲ್ಲ ಅಂದ್ರೆ ಪ್ರಶ್ನೆ ಮಾಡೋಕೆ ಇಂದು ವೋಟ್ ಹಾಕಿ: ನಟ ಗಣೇಶ್

Actor Ganesh Cast His Vote: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು (ಏಪ್ರಿಲ್ 26) ನಡೆಯುತ್ತಿದೆ. ಈಗಾಗಲೇ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಪ್ರಾರಂಭವಾಗಿದೆ. ಗೋಲ್ಡನ್ ಸ್ಟಾರ್ ನಟ ಗಣೇಶ್ ಹಾಗೂ ಅವರ ಪತ್ನಿ ಶಿಲ್ಪಾ ಗಣೇಶ್ ಅವರು ಮತದಾನ ಮಾಡಿದ್ದಾರೆ.

ಮತದಾನದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಗಣೇಶ್, ನನ್ನ ಹಕ್ಕನ್ನು ಚಲಾಯಿಸಿದ್ದೀನಿ, ನಿಮಗೆ ಯಾರು ಒಳ್ಳೆಯವರು ಅನಿಸುತ್ತದೆಯೋ ಅವರಿಗೆ ಮತ ಹಾಕಿ. ತಪ್ಪದೇ ಎಲ್ಲರೂ ವೋಟ್ ಹಾಕಿ. ಏಕೆಂದರೆ ಮುಂದೆ ಯಾವುದಾದರೂ ಕೆಲಸ ಆಗಿಲ್ಲ ಎಂದು ಪ್ರಶ್ನೆ ಮಾಡಬೇಕು ಅಂದ್ರೆ ಇಂದು ವೋಟ್ ಹಾಕಬೇಕು ಎಂದು ಗಣೇಶ ಹೇಳಿದರು.

ಇಂದು ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳೂ ಸೇರಿದಂತೆ ದೇಶದಾದ್ಯ ನಡೆಯುತ್ತಿದೆ. ಎರಡನೇ ಹಂತದಲ್ಲಿ ಒಟ್ಟು 13 ರಾಜ್ಯಗಳ 89 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.

Share this content:

Post Comment

You May Have Missed