ಬೆಟ್ಟಿಂಗ್ ಆಪ್ ಪ್ರಕರಣದಲ್ಲಿ ಬಾಲಿವುಡ್ ನಟ ಸಾಹಿಲ್ ಖಾನ್ ಬಂಧನ..!
Sahil Khan arrested: ಮಹದೇವ್ ಬೆಟ್ಟಿಂಗ್ ಆಪ್ ಪ್ರಕರಣದಲ್ಲಿ ಸುದೀರ್ಘ ಕಾರ್ಯಾಚರಣೆಯ ನಂತರ ಬಾಲಿವುಡ್ ನಟ ಸಾಹಿಲ್ ಖಾನ್ ಅವರನ್ನು ಬಂಧಿಸಲಾಗಿದೆ.ಅಲ್ಲದೆ, ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದ ನಂತರ ಮುಂಬೈ ಪೊಲೀಸ್ ಸೈಬರ್ ಸೆಲ್‌ನ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಾಹಿಲ್ ಖಾನ್ ಅವರನ್ನು ಛತ್ತೀಸ್‌ಗಢದಲ್ಲಿ ವಶಕ್ಕೆ ಪಡೆದಿದೆ.
ಹೌದು… ಮಹಾದೇವ್ ಬೆಟ್ಟಿಂಗ್ ಆಪ್ (Mahadev betting app case) ಪ್ರಕರಣದಲ್ಲಿ ನಟ ಸಾಹಿಲ್ ಖಾನ್ ಹೆಸರು ಕೇಳಿ ಬಂದ ಹಿನ್ನೆಲೆ ಬಂಧನದ ಭೀತಿಯಿಂದ ಖಾನ್, ಮುಂಬೈನಿಂದ ಪಲಾಯನಗೈದಿದ್ದರು. ಅಲ್ಲದೆ ಅವರ ಜಾಮೀನಿನ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದ ನಂತರ ನಟ ಎಸ್ಕೇಪ್ ಆಗಿದ್ದ ಎಂದು ಮೂಲಗಳು ಹೇಳುತ್ತವೆ.
ಸಧ್ಯ ಛತ್ತೀಸ್‌ಗಢ ಪೊಲೀಸರ ಸಹಾಯದಿಂದ 40 ಗಂಟೆಗಳ ಸುದೀರ್ಘ ಕಾರ್ಯಾಚರಣೆಯ ನಂತರ ನಟ ಸಾಹೀಲ್ ಖಾನ್ ಬಂಧಿಸಲಾಗಿದ್ದು, ಅವರನ್ನು ಮುಂಬೈಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Share this content:
Post Comment