ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿ ನಟಿ ಮಾನ್ವಿತಾ ಕಾಮತ್-ಅರುಣ್..!
Manvita Kamath wedding : ಸ್ಯಾಂಡಲ್ವುಡ್ ನಟಿ ಮಾನ್ವಿತಾ ಕಾಮತ್ ಅವರ ಮದುವೆ ಇಂದು ಅದ್ದೂರಿಯಾಗಿ ನೆರವೇರಿತು. ಕುಟುಂಬದವರು, ಆಪ್ತರು ಹಾಗೂ ಕನ್ನಡ ಚಿತ್ರರಂಗದ ಗಣ್ಯರ ನಡುವೆ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತು.
ಮೈಸೂರಿನ ಹುಡುಗ ಅರುಣ್ ಕಮಾರ್ ಜೊತೆ ಮಾನ್ವಿತಾ ಕಾಮತ್ ಇಂದು (ಬುಧವಾರ 1) ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಚಿಕ್ಕಮಗಳೂರಿನ ಕಳಸದಲ್ಲಿ ಮಾನ್ವಿತಾ ಹಾಗೂ ಅರುಣ್ ಮದುವೆ ಅದ್ಧೂರಿಯಾಗಿ ನಡೆಯಿತು.
ನಿನ್ನೆ ಜೋಡಿಯ ವಿವಾಹ ಪೂರ್ವ ಕಾರ್ಯಕ್ರಮಗಳು ಅದ್ಧೂರಿಯಾಗಿ ಜರುಗಿದ್ದವು. ಈ ಕುರಿತ ವಿಡಿಯೋ ಮತ್ತು ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಇಂದು ಸಪ್ತಪದಿ ತುಳಿದ ಜೋಡಿಗೆ ಅವರ ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ.ಕಳಸದ 500 ವರ್ಷಗಳ ಇತಿಹಾಸ ಇರುವ ವೆಂಕಟೇಶ್ವರ ದೇವಾಲಯದಲ್ಲಿ ವಿವಾಹ ನೆರವೇರಿತು.
ನಟಿಯರಾದ ನಿಧಿ ಸುಬ್ಬಯ್ಯ, ಶ್ರುತಿ ಹರಿಹರನ್, ನಿರೂಪಕ ನಿರಂಜನ್ ಸೇರಿದಂತೆ ಚಿತ್ರರಂಗದ ಹಲವರು ಭಾಗಿಯಾಗಿದ್ದರು.
ಸಿನಿಮಾ ಸುದ್ದಿಗಳು, ಲೆಟೆಸ್ಟ್ ಅಪ್ಡೆಟ್ಸ್ಗಾಗಿ ಈಗಲೇ ನಮ್ಮ Movie Magic ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಿ
Facebook Link – http://surl.li/sinyi
Instagram Link – http://surl.li/sinyq
WhatsApp Channel- http://surl.li/sinza
Share this content:
Post Comment