Sai Pallavi : ಅಮೀರ್ ಖಾನ್ ಪುತ್ರನ ಜೊತೆ ಪಬ್‌ನಲ್ಲಿ ಕುಣಿದು ಕುಪ್ಪಳಿಸಿದ ನಟಿ ಸಾಯಿ ಪಲ್ಲವಿ..! ವಿಡಿಯೋ ವೈರಲ್
Sai Pallavi : ಪ್ರೇಮಂ ಬೆಡಗಿ, ನ್ಯಾಚುಲರ್ ಬ್ಯೂಟಿ ನಟಿ ಸಾಯಿ ಪಲ್ಲವಿ ಬಾಲಿವುಡ್ ನಟ ಅಮೀರ್ ಖಾನ್ ಮಗ ಜುನೈದ್ ಜೊತೆ ಪಾರ್ಟಿ ಮಾಡಿರುವ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಕುರಿತ ವರದಿ ಇಲ್ಲಿದೆ..
ಗಾರ್ಗಿ ಚಿತ್ರದ ನಂತರ ಬ್ರೇಕ್ ನಟಿ ಸಾಯಿ ಪಲ್ಲವಿ ಇದೀಗ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ತೆಲುಗು, ತಮಿಳು ಸೇರಿದಂತೆ ಬಾಲಿವುಡ್‌ಗೂ ಕಾಲಿಟ್ಟಿರುವ ನ್ಯಾಚುರಲ್ ಬ್ಯೂಟಿ ಸಖತ್ ಬ್ಯುಸಿಯಾಗಿದ್ದಾರೆ. ಇದರ ನಡುವೆ ಪಲ್ಲವಿ ಅಮೀರ್ ಖಾನ್ ಪುತ್ರನ ಜೊತೆ ಜಪಾನ್‌ನಲ್ಲಿ ಜೊತೆ ಪಾರ್ಟಿ ಮಾಡಿರುವ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಹೌದು.. ಬಾಲಿವುಡ್‌ಗೆ ಎಂಟ್ರಿ ಕೊಟ್ಟಿರುವ ಸುಂದರಿ, ಬಿಟೌನ್ ಸ್ಟಾರ್ ಹೀರೋ ಅಮೀರ್ ಖಾನ್ ಪುತ್ರ ಜುನೈದ್ ಖಾನ್ ನಟನೆಯ ಮುಂಬರುವ ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಚಿತ್ರದ ಚಿತ್ರೀಕರಣ ಜಪಾನ್‌ನಲ್ಲಿ ನಡೆಯುತ್ತಿದೆ. ಶೂಟಿಂಗ್ ಮುಗಿದ ಹಿನ್ನಲೆ ಚಿತ್ರತಂಡ ಪಬ್‌ನಲ್ಲಿ ಪಾರ್ಟಿ ಮಾಡಿತ್ತು. ಈ ವೇಳೆ ಸಾಯಿ ಪಲ್ಲವಿ ಟೀಂ ಜೊತೆ ಸಖತ್ ಡ್ಯಾನ್ಸ್ ಮಾಡಿದ್ದಾರೆ.
ಸಧ್ಯ ಸಾಯಿ ಪಲ್ಲವಿ ಡ್ಯಾನ್ಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಲ್ಲವಿ ಡ್ಯಾನ್ಸ್ ನೋಡಿ ನೆಟ್ಟಿಗರು ಮತ್ತು ಅಭಿಮಾನಿಗಳು ಖುಷಿಯಾಗಿದ್ದಾರೆ. ಅಲ್ಲದೆ, ಸೂಪರ್ ಡಾನ್ಸ್ ಅಂತ ಕಾಮೆಂಟ್ ಮಾಡುತ್ತಿದ್ದಾರೆ. ಈ ಸಿನಿಮಾ ಅಷ್ಟೇ ಅಲ್ಲದೆ, ಬಾಲಿವುಡ್‌ನಲ್ಲಿ ನಿತೀಶ್ ತಿವಾರಿ ನಿರ್ದೇಶನದ ರಾಮಾಯಣ ಸಿನಿಮಾದಲ್ಲೂ ಸಾಯಿ ಪಲ್ಲವಿ ಸೀತೆಯ ಪಾತ್ರದಲ್ಲಿ ನಟಿಸಲಿದ್ದಾರೆ.
Share this content:
Post Comment