ಅಕ್ಕಿ-ಟೈಗರ್ ಪವರ್ ಪ್ಯಾಕ್ಡ್ ʼಬಡೆ ಮಿಯಾನ್ ಚೋಟೆ ಮಿಯಾನ್ ಟ್ರೇಲರ್ ಔಟ್..!
Bade Miyan Chote Miyan movie : ಬಹುನಿರೀಕ್ಷತ ʼಬಡೆ ಮಿಯಾನ್ ಚೋಟೆ ಮಿಯಾನ್ʼ ಟ್ರೇಲರ್ ರಿಲೀಸ್ ಆಗಿದೆ. ಮೈ ಜುಮ್ ಎನಿಸುವ ಹೈ ಆಕ್ಷನ್ ಸೀಕ್ವೆನ್ಸ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಕಿಲಾಡಿ ಟೈಗರ್ ಜುಗಲ್ ಬಂಧಿ ಸಿನಿಮಾದ ಮೇಲಿನ ಕ್ಯೂರಿಯಾಸಿಟಿ ಹುಟ್ಟಿಸುತ್ತಿದೆ.
ಈ ಸಿನಿಮಾದಲ್ಲಿ ವಿಲನ್ ಪಾತ್ರದಲ್ಲಿ ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ಕಾಣಿಸಿಕೊಂಡಿದ್ದಾರೆ. ಆದ್ರೆ ಟ್ರೇಲರ್ ನಲ್ಲಿ ಅವರ ಮುಖವನ್ನ ರಿವೀಲ್ ಮಾಡದೇ ಚಿತ್ರತಂಡ ಸೀಕ್ರೆಟ್ ಕಾಯ್ದುಗೊಂಡಿದೆ. ಈ ಸಿನಿಮಾದಲ್ಲಿ ಸೋನಾಕ್ಷಿ ಸಿನ್ಹಾ, ಮಾನುಷಿ ಚಿಲ್ಲರ್, ಅಲಯಾ ಎಫ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಮುಂಬೈ, ಲಂಡನ್, ಅಬುಧಾಬಿ, ಸ್ಕಾಟ್ಲೆಂಡ್ ಮತ್ತು ಜೋರ್ಡಾನ್ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಹಾಲಿವುಡ್ ರೇಂಜ್ಗೆ ಬಿಗ್ ಬಜೆಟ್ನಲ್ಲಿ ‘ಬಡೇ ಮಿಯಾನ್ ಚೋಟೆ ಮಿಯಾನ್’ ಅನ್ನು ನಿರ್ಮಿಸಲಾಗಿದ್ದು, ಅಲಿ ಅಬ್ಬಾಸ್ ಜಫರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.
ಚಿತ್ರವನ್ನು ವಶು ಭಗ್ನಾನಿ ಮತ್ತು ಪೂಜಾ ಎಂಟರ್ಟೈನ್ಮೆಂಟ್ ಎಎಝೆಡ್ ಫಿಲ್ಮ್ಸ್ ಸಹಯೋಗದಡಿ ಈ ಪ್ರಸ್ತುತಪಡಿಸುತ್ತಿದ್ದಾರೆ. 2024ರ ಏಪ್ರಿಲ್ – ಈದ್ ಸಂದರ್ಭ ಹಿಂದಿ, ಕನ್ನಡ, ತೆಲುಗು, ತಮಿಳು, ಮಲೆಯಾಳಂ ಭಾಷೆಯಲ್ಲಿ ಈ ಚಿತ್ರ ತೆರೆಕಾಣಲಿದೆ.
Share this content:
Post Comment