ನ್ಯಾಚುರಲ್ ಸ್ಟಾರ್ ನಾನಿ 33ನೇ ಸಿನಿಮಾ ಅನೌನ್ಸ್..! ಕುತೂಹಲ ಕೆರಳಿಸಿದ ಪೋಸ್ಟರ್
Nani 33 : ನ್ಯಾಚುರಲ್ ಸ್ಟಾರ್ ನಾನಿ (Nani) ನಟನೆ 33ನೇ ಸಿನಿಮಾ ಪೋಸ್ಟರ್ ಬಿಡುಗಡೆಯಾಗಿದೆ. ದಸರಾ ಮೂಲಕ ಧೂಳ್ ಎಬ್ಬಿಸಿದ್ದ ನಾನಿ ಮತ್ತೊಮ್ಮೆ ಅದೇ ತಂಡದ ಜೊತೆ ಕೈ ಜೋಡಿಸಿದ್ದಾರೆ. ಸಧ್ಯ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಸೋಷಿಯಲ್ ಮೀಡಿಯಾದಲ್ಲಿ ಹೈಪ್ ಸೃಷ್ಟಿಸಿದೆ.
ಹೌದು.. ನಾನಿ ನಟನೆಯ 33ನೇ (Nani 33) ಸಿನಿಮಾ ಘೋಷಣೆಯಾಗಿದೆ. ದಸರಾಗೆ ಆಕ್ಷನ್ ಕಟ್ ಹೇಳಿ ಮೊದಲ ಚಿತ್ರದಲ್ಲೇ ನಿರ್ದೇಶಕರಾಗಿ ಖ್ಯಾತಿ ಗಳಿಸಿರುವ ಶ್ರೀಕಾಂತ್ ಒಡೆಲಾ (Srikanth Odela), ನಿರ್ಮಾಪಕ ಸುಧಾಕರ್ ಚೆರುಕುರಿ ಹಾಗೂ ನಾನಿ ಎರಡನೇ ಬಾರಿಗೆ ಒಂದಾಗಿದ್ದಾರೆ. ಈ ಕ್ರೇಜಿ ಕಾಂಬೋದ ಹೊಸ ಪ್ರಾಜೆಕ್ಟ್ ಫಸ್ಟ್ ಲುಕ್ ಇದೀಗ ರಿವೀಲ್ ಆಗಿದೆ.
ಕೆಂಪು ಬಣ್ಣದ ಪೋಸ್ಟರ್‌ನಲ್ಲಿ ಬಾಯಲ್ಲಿ ಸಿಗರೇಟ್, ರಗಡ್ ಲುಕ್ ನಲ್ಲಿ ನಾನಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಪವರ್ ಪ್ಯಾಕ್ಡ್ ಆಕ್ಷನ್ ನೊಂದಿಗೆ ನಾನಿ ಮತ್ತೆ ಕಮ್‌ಬ್ಯಾಕ್ ಮಾಡುವ ಸೂಚನೆಯನ್ನು ನಿರ್ದೇಶಕ ಶ್ರೀಕಾಂತ್ ತಮ್ಮ ಹೊಸ ಪ್ರಾಜೆಕ್ಟ್ ಮೂಲಕ ತಿಳಿಸಿದ್ದಾರೆ.
ಶ್ರೀ ಲಕ್ಷ್ಮೀ ವೆಂಕಟೇಶ್ವರ ಸಿನಿಮಾಸ್ (SLV ಸಿನಿಮಾಸ್) ನಡಿ ಸುಧಾಕರ್ ಚೆರುಕುರಿ (Sudhakar Cherukuri) ನಾನಿ 33ನೇ ಚಿತ್ರವನ್ನು ನಿರ್ಮಾಣ ಮಾಡಲಾಗುತ್ತಿದೆ. ನಾನಿ ಈ ಚಿತ್ರದಲ್ಲಿ ಹಿಂದೆಂದೂ ಕಾಣದ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. 2025ಕ್ಕೆ ಸಿನಿಮಾ ತೆರೆಗೆ ತರೋದಿಕ್ಕೆ ಚಿತ್ರತಂಡ ಯೋಜನೆ ಹಾಕಿಕೊಂಡಿದೆ.
Share this content:
Post Comment