ನಟ ಶಿವರಾಜ್ ಕುಮಾರ್ ಆಸ್ಪತ್ರೆಗೆ ದಾಖಲು.. ಸರ್ಜರಿ.! ಏನಾಯ್ತು ಶಿವಣ್ಣನಿಗೆ?
Shivarajkumar hospitalized : ಸ್ಯಾಂಡಲ್ವುಡ್ ಹ್ಯಾಟ್ರಿಕ್ ಹೀರೋ ನಟ ಶಿವರಾಜ್ಕುಮಾರ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರಿಂದಾಗಿ ಅವರ ಅಭಿಮಾನಿಗಳು ಆತಂಕಗೊಂಡಿದ್ದಾರೆ. ಶಿವಣ್ಣ ಸಧ್ಯ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯಲ್ಲಿರುವ ವೈದೇಹಿ ಸೂಪರ್ ಸ್ಪಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೂಲಗಳ ಪ್ರಕಾರ ಶಿವಣ್ಣ (actor shivarajkumar admitted to hospital) ಅವರಿಗೆ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಇಲ್ಲ ಎಂದು ತಿಳಿದು ಬಂದಿದ್ದು, ಜನರಲ್ ಚಕಪ್ಗಾಗಿ ಆಸ್ಪತ್ರೆಗೆ ಬಂದಿದ್ದಾರೆ ಎನ್ನಲಾಗಿದೆ. ನಾಳೆ ಮಂಗಳವಾರ ಬೆಳಗ್ಗೆ ಅವರನ್ನು ಡಿಸ್ಚಾರ್ಜ್ ಮಾಡಲಾಗುವುದು ಎಂದು ಹೇಳಲಾಗುತ್ತಿದೆ.
ಶಿವಣ್ಣನ ಆರೋಗ್ಯದಲ್ಲಿ ಯಾವುದೇ ರೀತಿಯ ಏರುಪೇರು ಇಲ್ಲ. ಆದರೆ ಅವರಿಗೆ ಒಂದಿಷ್ಟು (Actor Shivarajkumar Admitted to hospital) ದಿನಗಳಿಂದ ಬೆರಳು ನೋವು ಕಾಣಿಸಿಕೊಂಡಿತ್ತು. ಈ ಹಿನ್ನಲೆ ಇವತ್ತು ವೈದೇಹಿ ಆಸ್ಪತ್ರೆಯಲ್ಲಿ ಸಣ್ಣ ಸರ್ಜರಿ ಮಾಡಿಸಿಕೊಂಡಿದ್ದಾರೆ ಎಂದು ಶಿವಣ್ಣನ ಆಪ್ತ ಮೂಲಗಳಿಂದ ತಿಳಿದು ಬಂದಿದೆ.
ಇನ್ನು ಶಿವಣ್ಣ ಸಖತ್ ಬ್ಯುಸಿ ಆಗಿದ್ದು, ಪತ್ನಿ ಗೀತಾ ಅವರ ಪರ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ಈ ಬಾರಿ ಗೀತಾ ಶಿವರಾಜ್ಕುಮಾರ್ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಹಾಗಾಗಿ ಸಿನಿಮಾ ಮತ್ತು ರಾಜಕೀಯ ಪ್ರಚಾರದಲ್ಲಿ ಶಿವರಾಜ್ಕುಮಾರ್ ಅವರು ನಿರತರಾಗಿದ್ದಾರೆ.
Share this content:
Post Comment