ಕೇಂದ್ರದ CAA ಜಾರಿಯನ್ನು ಒಪ್ಪಲ್ಲ, ಜಾರಿಗೆ ಬರಲು ಬಿಡಲ್ಲ : ನಟ ವಿಜಯ್ ಕಿಡಿ
Vijay on CAA implementation : ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ (Citizenship Amendment Act)ಯನ್ನು ಜಾರಿಗೊಳಿಸಿದ ಬೆನ್ನಲ್ಲೆ, ಪರ-ವಿರೋಧ ಚರ್ಚೆಗಳು ನಡೆಯುತ್ತಿದೆ. ಈ ಪೈಕಿ ತಮಿಳು ಚಲನಚಿತ್ರ ನಟ, ತಮಿಳಿಗ ವೆಟ್ರಿ ಕಳಗಂ ಪಾರ್ಟಿ ಸ್ಥಾಪಕ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಹೌದು.. ಪರ-ವಿರೋಧದ ನಡುವೆ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ (CAA)ಯನ್ನು ಜಾರಿಗೊಳಿಸಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಸೂಪರ್ ಸ್ಟಾರ್ ನಟ ವಿಜಯ್, ಈ ಕಾಯ್ದೆಯನ್ನು ತಮಿಳುನಾಡಿನಲ್ಲಿ ಜಾರಿಯಾಗದಂತೆ ನೋಡಿಕೊಳ್ಳಬೇಕು ಎಂದು ಅಭಿಪ್ರಾಯ ತಿಳಿಸಿದ್ದಾರೆ.
ಈ ಕುರಿತು ಪಕ್ಷದ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ವಿಜಯ್, ಸಿಎಎ ಜಾರಿಯನ್ನು ಒಪ್ಪಲು ಸಾಧ್ಯವಿಲ್ಲ. ದೇಶದಲ್ಲಿ ಎಲ್ಲರೂ ಸಹಬಾಳ್ವೆಯಿಂದ ಬಾಳುತ್ತಿದ್ದು, ಇಂತಹ ಕಾನೂನಿನ ಅಗತ್ಯವಿಲ್ಲ. ಇದು ʼವಿಭಜಕʼ ಕಾಯ್ದೆ ಅಂತ ಕಿಡಿಕಾರಿದ್ದಾರೆ.
ಸಿಎಎ ಅನ್ನು ಜಾರಿಗೊಳಿಸಲು ಕೇಂದ್ರವು ನಿನ್ನೆ ಅಧಿಸೂಚನೆಯನ್ನು ಹೊರಡಿಸಿತ್ತು. ಇದಕ್ಕೆ ನಟ ವಿಜಯ್ ಅಷ್ಟೇ ಅಲ್ಲ, ಮಮತಾ ಬ್ಯಾನರ್ಜಿ, ಪಿಣರಾಯಿ ವಿಜಯನ್, ಸೇರಿದಂತೆ ವಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ತಮ್ಮ ತಮ್ಮ ರಾಜ್ಯದಲ್ಲಿ ಈ ಕಾಯ್ದೆಯನ್ನು ಜಾರಿಯಾಗಲು ಬಿಡುವುದಿಲ್ಲ ಎಂದಿದ್ದಾರೆ.
Share this content:
Post Comment