Kantara 2 : ರಿಷಬ್ ಶೆಟ್ಟಿ ಕಾಂತಾರ 2 ಸಿನಿಮಾದಲ್ಲಿ ಜೂ.ಎನ್‌ಟಿಆರ್..! ಪಾತ್ರ ಯಾವುದು ಗೊತ್ತೆ..?
Jr NTR in Kantara 2 : ಕಾಂತಾರ ಮೊದಲ ಭಾಗ ಸೂಪರ್ ಹಿಟ್ ಆದ ಬೆನ್ನಲ್ಲೆ ನಟ, ನಿರ್ದೇಶಕ ರಿಷಬ್ ಶೆಟ್ ಈ ಸಿನಿಮಾದ ಪ್ರೀಕ್ವೆಲ್ ಅನೌನ್ಸ್ ಮಾಡಿದ್ದು ಎಲ್ಲರಿಗೂ ಗೊತ್ತಿದೆ. ಇದೀಗ ಈ ಸಿನಿಮಾದಿಂದ ಬಿಗ್ ಅಪ್‌ಡೇಟ್ ಒಂದು ಹೊರಬಿದ್ದಿದ್ದು, ಈ ಚಿತ್ರದಲ್ಲಿ ತೆಲಗು ಸೂಪರ್ ಸ್ಟಾರ್ ನಟ ಜೂ. ಎನ್‌ಟಿಆರ್ ನಟಿಸಲಿದ್ದಾರೆ ಎನ್ನಲಾಗಿದೆ.
ಹೌದು.. ʼಕಾಂತಾರʼ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದೊಡ್ಡಮಟ್ಟದಲ್ಲಿ ಸದ್ದು ಮಾಡಿತ್ತು. ಕನ್ನಡಿಗನ ಸಿನಿಮಾಗೆ ಪ್ಯಾನ್ ಇಂಡಿಯಾ ಲೆವಲೆನಲ್ಲಿ ಭರ್ಜರಿ ಪ್ರತಿಕ್ರಿಯೆ ಸಿಕ್ಕಿತ್ತು. ಈ ಸಿನಿಮಾ ಬಿಡುಗಡೆಯಾದ ದಿನದಿಂದ ಚಿತ್ರಮಂದಿರಗಳು ದೇವಸ್ಥಾನದಂತೆ ಭಾಸವಾಗಿದ್ದರು. ಅಷ್ಟರ ಮಟ್ಟಿಗೆ ಕಾಂತಾರ ಪರಿಣಾಮ ಬೀರಿತ್ತು.
ಸಧ್ಯ ಕಾಂತಾರ 2 ತೆರೆಗೆ ಬರಲು ರೆಡಿಯಾಗುತ್ತಿದೆ. ಈಗಾಗಲೇ ಸಿನಿಮಾದ ಮುಹೂರ್ತ ನಡೆದಿದ್ದು, ಕಲಾವಿದರ ಆಯ್ಕೆಯೂ ಸಹ ಮುಗಿದಿದೆ. ಪಂಜುರ್ಲಿ ದೈವದ ಮೂಲದ ಕಥಾ ಆಧಾರಿತ ಸಿನಿಮಾ ಇದಾಗಿದ್ದು, ಕುತೂಹಲ ಮುಡಿಸುತ್ತಿದೆ. ಕಳೆದ ಕೆಲವು ತಿಂಗಳ ಹಿಂದೆ ಬಿಡುಗಡೆಯಾದ ಚಿತ್ರದ ಪೋಸ್ಟರ್ ಸಖತ್ ಕ್ಯೂರಿಯಾಸಿಟಿ ಹುಟ್ಟಿಸಿತ್ತು.
ಇನ್ನು ʼಕಾಂತಾರ ಭಾಗ 2 ರಲ್ಲಿ ಟಾಲಿವುಡ್ ಸೂಪರ್ ಸ್ಟಾರ್ ಜೂ. ಎನ್‌ಟಿಆರ್ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತು ಟಾಲಿವುಡ್ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ. ಅಲ್ಲದೆ, ಕಳೆದ ಕೆಲವು ದಿನಗಳ ಹಿಂದೆ ರಿಷಬ್ ಎನ್‌ಟಿಆರ್ ಭೇಟಿಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದು ಈ ಸುದ್ದಿಗೆ ಬಲ ನೀಡಿದೆ.
ಸಧ್ಯ ದೇವರ ಸಿನಿಮಾದ ಶೂಟಿಂಗ್‌ನಲ್ಲಿ ಎನ್‌ಟಿಆರ್ ಬ್ಯುಸಿಯಾಗಿದ್ದಾರೆ. ಇತ್ತ ರಿಷಬ್ ಶೆಟ್ಟಿ ಕಾಂತಾರ 2 ಸಿನಿಮಾದ ತಯಾರಿಯಲ್ಲಿದ್ದಾರೆ. ಆದರೆ ಈ ಕುರಿತು ಚಿತ್ರತಂಡವಾಗಲಿ, ನಿರ್ಮಾಣ ಸಂಸ್ಥೆ ಯಾವುದೇ ಮಾಹಿತಿ ನೀಡಿಲ್ಲ. ಅಲ್ಲದೆ ಈ ಬಗ್ಗೆ ಎಲ್ಲೂ ಕೂಡ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
Share this content:
Post Comment