Loading Now

ತುಕಾಲಿ ಸಂತೋಷ್ ಕಾರು ಅಪಘಾತ : ಆಟೋ ಚಾಲಕ ನಿಧನ

ತುಕಾಲಿ ಸಂತೋಷ್ ಕಾರು ಅಪಘಾತ : ಆಟೋ ಚಾಲಕ ನಿಧನ

Tukali Santhosh Car Accident: ಬಿಗ್ ಬಾಸ್ 10 ರ ಸ್ಪರ್ಧಿ ತುಕಾಲಿ ಸಂತೋಷ್​ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಆಟೋ ಚಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದಾರೆ.

ಹೌದು… ಮಾರ್ಚ್ 13ರ ಸಂಜೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ತುಕಾಲಿ ಸಂತೋಷ ಕಾರು ಮತ್ತು ಆಟೋ ನಡುವೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಆಟೋ ಚಾಲಕ ಜಗದೀಶ್ ಗಾಯಗೊಂಡಿದ್ದರು. ಅವರನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ವಿವರ: ನಿನ್ನೆ ಸಂಜೆ ತುಕಾಲಿ ಸಂತೋಷ್​ ತಮ್ಮ ಕಾರಿನಲ್ಲಿ ತುಮಕೂರು ಕಡೆಯಿಂದ ಕುಣಿಗಲ್ ಮಾರ್ಗವಾಗಿ ಹೊಳೆನರಸೀಪುರ ದತ್ತ ಹೋಗುತ್ತಿದ್ದರು. ಈ ವೇಳೆ ಕುಣಿಗಲ್​ನಿಂದ ಕುರುಡಿಹಳ್ಳಿಗೆ ಆಟೋ ತೆರಳುತ್ತಿತ್ತು. ತುಕಾಲಿ ಸಂತೋಷ್​ ಕಾರಿನ ಬಲ ಭಾಗಕ್ಕೆ ಆಟೋ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಆಟೋ ಬಹುತೇಕ ನಜ್ಜುಗುಜ್ಜಾಗಿತ್ತು.

ಇನ್ನು ಅಪಘಾತದಲ್ಲಿ ಗಾಯಗೊಂಡಿದ್ದ ಆಟೋ ಚಾಲಕ ಜಗದೀಶ್ ಅವರನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಅವರು ಇಂದು (ಮಾರ್ಚ್ 14) ಮುಂಜಾನೆ ಮೃತಪಟ್ಟಿದ್ದಾರೆ.

ಜಗದೀಶ್ ಅವರಿಗೆ 40 ವರ್ಷ ವಯಸ್ಸಾಗಿತ್ತು. ಅವರ ನಿಧನ ಕುಟುಂಬಕ್ಕೆ ತೀವ್ರ ನೋವುಂಟು ಮಾಡಿದೆ.

Share this content:

Post Comment

You May Have Missed