ಕನ್ನಡದ ಖ್ಯಾತ ನಟ ಪ್ರಕಾಶ್ ಹೆಗ್ಗೋಡು ನಿಧನ
Prakash Heggodu: ಕನ್ನಡ ಚಿತ್ರರಂಗದ ಖ್ಯಾತ ನಟ ಪ್ರಕಾಶ್ ಹೆಗ್ಗೋಡು ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.
ಹೌದು.. ಪ್ರಕಾಶ್ ಹೆಗ್ಗೋಡು ಅವರು ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದ (Prakash heggodu death) ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದರು. ಪ್ರಕಾಶ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ಅವರ ಸಾವಿನ ಸುದ್ದಿ ಕೇಳಿ ಅಭಿಮಾನಿಗಳು ಶಾಕ್ ಆಗಿದ್ದಾರೆ.
ಕನ್ನಡದಲ್ಲಿ 25ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಪ್ರಕಾಶ್ ಹೆಗ್ಗೋಡು ನಟಿಸಿದ್ದಾರೆ.. ಹೆಚ್ಚಾಗಿ ಖಳನಾಯಕ (Prakash heggodu passed away) ನಟನಾಗಿ ಗುರುತಿಸಿಕೊಂಡಿದ್ದರು. ಪ್ರಕಾಶ ಅವರ ಅಗಲಿಕೆಗೆ ಚಂದನವನದ ಅನೇಕ ನಟ ನಟಿಯರು ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಹೋರಾಟಗಾರ ಮತ್ತು ರಂಗಭೂಮಿ ಕಲಾವಿದರಾಗಿಯೂ ಗುರುತಿಸಿಕೊಂಡಿದ್ದ ಪ್ರಕಾಶ್ ಹೆಗ್ಗೋಡು ಅವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು. ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
Share this content:
Post Comment