Loading Now

ಬನ್ನಿ ಫ್ಯಾನ್ಸ್ ಗೆ ಗುಡ್ ನ್ಯೂಸ್ : ‘ಪುಷ್ಪ 2’ ಟೀಸರ್ ರಿಲೀಸ್​ಗೆ ಡೇಟ್ ಫಿಕ್ಸ್.!

ಬನ್ನಿ ಫ್ಯಾನ್ಸ್ ಗೆ ಗುಡ್ ನ್ಯೂಸ್ : ‘ಪುಷ್ಪ 2’ ಟೀಸರ್ ರಿಲೀಸ್​ಗೆ ಡೇಟ್ ಫಿಕ್ಸ್.!

Pushpa2 Teaser : ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಸ್ಟಾರ್ ಡೈರೆಕ್ಟರ್ ಸುಕುಮಾರ್ ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ ‘ಪುಷ್ಪ 2: ದಿ ರೂಲ್’. ಇದೀಗ ಈ ಚಿತ್ರತಂಡದಿಂದ ಬಿಗ್ ಅಪ್ ಡೇಟ್ ಸಿಕ್ಕಿದ್ದು, ಟ್ರೇಲರ್ ರಿಲೀಸ್ ಗೆ ಡೇಟ್ ಫಿಕ್ಸ್ ಆಗಿದೆ.

ಹೌದು.. 2021 ರಲ್ಲಿ ಬಿಡುಗಡೆಯಾದ ಪುಷ್ಪ ಸಿನಿಮಾ ಉತ್ತಮ ಪ್ರದರ್ಶನ ಕಂಡಿತ್ತು. ಸುಕುಮಾರ್ ನಿರ್ದೇಶನದ ಈ ಸಿನಿಮಾದಲ್ಲಿ ಬನ್ನಿಗೆ ಜೋಡಿಯಾಗಿ ನ್ಯಾಷುನಲ್ ಕ್ರಶ್ ರಶ್ಮಿಕಾ ನಟಿಸಿದ್ದಾರೆ. ಸದ್ಯ ಪುಷ್ಪ 2 ಸಿನಿಮಾ ರಿಲೀಸ್ ಗೆ ರೆಡಿಯಾಗಿದ್ದು, ಶೀಘ್ರದಲ್ಲೇ ಟೀಸರ್ (Allu Arjun Pushpa 2 teaser) ಬಿಡುಗಡೆಯಾಗಲಿದೆ ಎಂದು ತಿಳಿದು ಬಂದಿದೆ.

ಇನ್ನು ‘ಪುಷ್ಪ 2’ ಚಿತ್ರತಂಡ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತು ಪೋಸ್ಟರ್ ಹಂಚಿಕೊಂಡಿರುವ ಟೀಂ ಟೀಸರ್ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ. ಬನ್ನಿ ಹುಟ್ಟುಹಬ್ಬದಂದು ಅಂದ್ರೆ ಏಪ್ರಿಲ್ 8 ರಂದು ‘ಪುಷ್ಪ 2’ (Allu Arjun birthday) ಚಿತ್ರದ ಟೀಸರ್ ಬಿಡುಗಡೆಯಾಗಲಿದೆ ಎನ್ನುವ ಬಿಗ್ ಅಪ್ಡೇಟ್ ನೀಡಿದೆ. ‘ಪುಷ್ಪ 2’ ಆಗಸ್ಟ್ 15 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ.

ಪುಷ್ಪ 2 ಚಿತ್ರದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಜಿಲ್, ಜಗಪತಿ ಬಾಬು, ಪ್ರಕಾಶ್ ರಾಜ್, ಸುನೀಲ್ ಮತ್ತು ಅನಸೂಯಾ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಮೈತ್ರಿ ಮೂವೀ ಮೇಕರ್ಸ್ ನಿರ್ಮಾಣದ ಈ ಚಿತ್ರಕ್ಕೆ ದೇವಿ ಶ್ರೀಪ್ರಸಾದ್ ಸಂಗೀತ ಸಂಯೋಜಿಸುತ್ತಿದ್ದಾರೆ.

Share this content:

Post Comment

You May Have Missed