ಕಲ್ಕಿ 2898 AD ಚಿತ್ರದ ಅಧಿಕೃತ ರಿಲೀಸ್ ಡೇಟ್ ಅನೌನ್ಸ್..! ಮುಂದಿನ ತಿಂಗಳು ಸಿನಿಮಾ ನೋಡೋಕೆ ರೆಡಿಯಾಗಿ
Kalki Movie release date : ಯಂಗ್ ರೆಬಲ್ ಸ್ಟಾರ್ ಪ್ರಭಾಸ್ ನಟನೆಯ ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಈಗಾಗಲೇ ಬಹುತೇಕ ಶೂಟಿಂಗ್ ಮುಗಿಸಿರುವ ಚಿತ್ರತಂಡ ಇದೇ ಜೂನ್ 27ಕ್ಕೆ ಈ ಸಿನಿಮಾ ಬಿಡುಗಡೆ ಮಾಡಲು ರೆಡಿಯಾಗಿದೆ.
ಹೌದುಯ.. ನಾಗ ಅಶ್ವಿನ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸೈನ್ಸ್ ಫಿಕ್ಷನ್ ಕಲ್ಕಿ ಚಿತ್ರ ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಏಕಕಾಲದಲ್ಲಿ ಬಿಡುಗಡೆ ಆಗಲಿದೆ. ಇತ್ತೀಚೆಗಷ್ಟೇ ಈ ಸಿನಿಮಾದಿಂದ ಬಿಟೌನ್ ಹಿರಿಯ ನಟ ಅಮಿತಾಬ್ ಬಚ್ಚನ್ ಅವರ ಹೊಸ ಲುಕ್ ಹೇಗಿರಲಿದೆ ಎಂಬುದನ್ನು ರಿವೀಲ್ ಮಾಡಿತ್ತು. ಈಗ ಸಿನಿಮಾ ಬಿಡುಗಡೆಯ ದಿನಾಂಕ ಘೋಷಣೆ ಮಾಡಿ ಸರ್ಪ್ರೈಸ್ ನೀಡಿದೆ.
ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಕಲ್ಕಿ ಸಿನಿಮಾದಲ್ಲಿ ಡಾರ್ಲಿಂಗ್ ಪ್ರಭಾಸ್ ನಾಯಕನಾಗಿ ನಟಿಸುತ್ತಿದ್ದರೆ, ದೀಪಿಕಾ ಪಡುಕೋಣೆ, ಅಮಿತಾಬ್ ಬಚ್ಚನ್, ಕಮಲ್ ಹಾಸನ್, ದಿಶಾ ಪಟಾಣಿ ಸೇರಿ ಘಟಾನುಘಟಿಗಳೇ ನಟಿಸುತ್ತಿದ್ದಾರೆ. ವೈಜಯಂತಿ ಮೂವೀಸ್ ಈ ಸಿನಿಮಾ ನಿರ್ಮಾಣ ಮಾಡುತ್ತಿದೆ. ಪುರಾಣ ಪ್ರೇರಿತ ವೈಜ್ಞಾನಿಕ ಕಥೆಯುಳ್ಳ ಸಿನಿಮಾ ಇದಾಗಿದೆ.
Share this content:
Post Comment