ಆ ಕೇಸ್ ಸಂಬಂಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದ ನಟಿ ರಶ್ಮಿಕಾ ಮಂದಣ್ಣ.!
Rashmika Mandanna : ನಟಿ ರಶ್ಶಿಕಾ ಮಂದಣ್ಣ ದೆಹಲಿ ಪೊಲೀಸರ ಮುಂದೆ ಹಾಜರಾಗಿದ್ದು, ಡೀಪ್ ಫೇಕ್ ಪ್ರಕರಣಕ್ಕೆ ಸಂಬಂಧಿಸಿ ನಟಿ ತಮ್ಮ ಹೇಳಿಕೆಯನ್ನು ನೀಡಿದ್ದಾರೆ. ಈ ಕುರಿತು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.
ಕಳೆದ ಕೆಲವು ತಿಂಗಳುಗಳ ಹಿಂದೆ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಸಾಕಷ್ಟು ಸದ್ದು ಮಾಡಿತ್ತು. ಹಿರಿಯ ನಟ ನಟಿಯರು ಸೇರಿದಂತೆ ಈ ಕುರಿತು ವಿರೋಧ ವ್ಯಕ್ತಪಡಿಸಿದದ್ದರು. ದೇಶದಾದ್ಯಂತ ಈ ನಡೆಯನ್ನು ಖಂಡಿಸಿ, ಅನೇಕರು ಆಕ್ರೋಶ ಹೊರ ಹಾಕಿದ್ದರು.
ಅಲ್ಲದೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಕಿಡಿಗೇಡಿಗಳ ಮೇಲೆ ಕ್ರಮಕ್ಕೆ ಮುಂದಾಗಿದ್ದವು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದು ಈ ಬಗ್ಗೆ ಹೇಳಿಕೆ ಪಡೆಯಲು ರಶ್ಮಿಕಾ ಅವರನ್ನು ಠಾಣೆಗೆ ಬರುವಂತೆ ತಿಳಿಸಿದ್ದರು. ಈ ಸಂಬಂಧ ನಟಿ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು.
ನಟಿ ರಶ್ಮಿಕಾ ಸೇರಿದಂತೆ ಹಲವರ ಡೀಪ್‌ಫೇಕ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಆಂಧ್ರ ಪ್ರದೇಶದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಆರೋಪಿ ಬಂಧನದ ಬಳಿಕ ರಶ್ಮಿಕಾ ಪ್ರತಿಕ್ರಿಯೆ ಕೂಡ ನೀಡಿದ್ದರು. ವೃತ್ತಿಯಲ್ಲಿ ಡಿಜಿಟಲ್ ಮಾರ್ಕೆಟರ್ ಆಗಿ ಕೆಲಸ ನಿರ್ವಹಿಸುತ್ತಿರುವ, ಆಂಧ್ರ ಪ್ರದೇಶದ ಗುಂಟೂರು ಮೂಲದ ನವೀನ್ ಈಮಾನಿ ಎಂಬಾತನ್ನನು ಪೊಲೀಸರು ಬಂಧಿಸಿದ್ದಾರೆ.
Share this content:
Post Comment