Loading Now

ಸಲ್ಮಾನ್‌ ಖಾನ್‌ ಮನೆ ಮುಂದೆ ಗುಂಡಿನ ದಾಳಿ ಮಾಡಿದ್ದ ಆರೋಪಿ ಪೊಲೀಸ್‌ ಠಾಣೆಯಲ್ಲಿ ಆತ್ಮಹತ್ಯೆ..!

ಸಲ್ಮಾನ್‌ ಖಾನ್‌ ಮನೆ ಮುಂದೆ ಗುಂಡಿನ ದಾಳಿ ಮಾಡಿದ್ದ ಆರೋಪಿ ಪೊಲೀಸ್‌ ಠಾಣೆಯಲ್ಲಿ ಆತ್ಮಹತ್ಯೆ..!

Salman Khan Firing Update : ಬಾಲಿವುಡ್‌ ನಟ ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ ಪ್ರಕಣದ ಬಂಧಿತ ಆರೋಪಿಗಳ ಪೈಕಿ ಅನುಜ್ ಥಾಪನ್ ಪೊಲೀಸ್ ಕಸ್ಟಡಿಯಲ್ಲಿಯೇ ಆತ್ಮಹತ್ಯೆ ಶರಣಾಗಿದ್ದಾಗಿ ತಿಳಿದು ಬಂದಿದೆ. ಮುಂಬೈ ಕ್ರೈಂ ಬ್ರಾಂಜ್‌ ಪೊಲೀಸರ ವಶದಲ್ಲಿದ್ದ ಆರೋಪಿ ಅನುಜ್‌ ಬೆಡ್‌ ಶೀಟ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.

ಆರೋಪಿಯ ಮರಣೋತ್ತರ ಪರೀಕ್ಷೆಯನ್ನು ಜೆಜೆ ಆಸ್ಪತ್ರೆಯಲ್ಲಿ ನಡೆಸಲಾಗುವುದು ಎಂಬ ಮಾಹಿತಿ ಇದೆ. ಮುಂಬೈ ಕ್ರೈಂ ಬ್ರಾಂಚ್ ವಶದಲ್ಲಿದ್ದ ಅನುಜ್, ಬೆಡ್‌ಶೀಟ್‌ ಸಹಾಯದಿಂದ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಆರೋಪಿಯನ್ನು ಪೊಲೀಸರು ಜೆಜೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದರು ಎನ್ನಲಾಗಿದೆ.

ಘಟನೆಯ ಹಿನ್ನೆಲೆ: ಏಪ್ರಿಲ್ 14 ರಂದು ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಮುಂದೆ ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ನಾಲ್ಕು ಸುತ್ತು ಗುಂಡು ಹಾರಿಸಿದ್ದರು. ಘಟನೆ ಬೆಳಿಗ್ಗೆ 4.51 ರ ಸುಮಾರಿಗೆ ಸಂಭವಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಶೂಟರ್‌ಗಳಾದ ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್ ಎಂಬುವರನ್ನು ಗುಜರಾತ್‌ನ ಭುಜ್‌ನಿಂದ ಮುಂಬೈ ಪೊಲೀಸರು ಬಂಧಿಸಿದ್ದರು.

ವಿಚಾರಣೆ ವೇಳೆ ಇಬ್ಬರು ಬಂಧಿತ ಶೂಟರ್‌ಗಳು ಘಟನೆಯಲ್ಲಿನ ಅವರ ಪಾತ್ರದ ಬಗ್ಗೆ ಮಾಹಿತಿ ನೀಡಿದ್ದರು. ನಂತರ ಅನುಜ್‌ ಥಾಪನ್ ಮತ್ತು ಚಂದರ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ಈ ಪೈಕಿ ಇದೀಗ ಅನುಜ್‌ ಥಾಪನ್‌ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸಿನಿಮಾ ಸುದ್ದಿಗಳು, ಲೆಟೆಸ್ಟ್‌ ಅಪ್‌ಡೆಟ್ಸ್‌ಗಾಗಿ ಈಗಲೇ ನಮ್ಮ Movie Magic ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಿ

Facebook Link – http://surl.li/sinyi
Instagram Link – http://surl.li/sinyq
WhatsApp Channel- http://surl.li/sinza

Share this content:

Post Comment

You May Have Missed