Bharti Singh : ಖ್ಯಾತ ಹಾಸ್ಯ ನಟಿ ಭಾರತಿ ಸಿಂಗ್ ಆಸ್ಪತ್ರೆಗೆ ದಾಖಲು..! ಶಸ್ತ್ರಚಿಕಿತ್ಸೆ, ಪ್ಯಾನ್ಸ್ ಆತಂಕ
Bharti Singh hospitalised : ಬಾಲಿವುಡ್ ಖ್ಯಾತ ಹಾಸ್ಯನಟ ಭಾರತಿ ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಟ್ಟೆಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆ ಪರೀಕ್ಷೆಗಾಗಿ ಆಸ್ಪತ್ರೆಗೆ ಬಂದಾಗ ನಟಿಗೆ ಗಂಭೀರ ಸಮಸ್ಯೆ ಇರುವುದು ಕಂಡು ಬಂದಿದೆ. ಸಧ್ಯ ಭಾರತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿರುವ ನಟಿ, ಮೂರು ದಿನಗಳಿಂದ ಆರೋಗ್ಯ ಹದಗೆಟ್ಟಿದ್ದು, ಈಗ ಆಸ್ಪತ್ರೆಗೆ ದಾಖಲಾಗಿದ್ದಾಗಿ ಹೇಳಿಕೊಂಡಿದ್ದಾರೆ. ಈ ಕುರಿತ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅವರ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.
ವಿಡಿಯೋದಲ್ಲಿ ಭಾರತಿ, ನನಗೆ ಹೊಟ್ಟೆಯಲ್ಲಿ ನೋವು ಕಾಣಿಸಿಕೊಂಡಿತು, ಅದಕ್ಕಾಗಿ ಆಸ್ಪತ್ರೆಗೆ ಬಂದಾಗ ಗಂಭೀರ ಸಮಸ್ಯೆ ಇರುವುದು ಗೊತ್ತಾಗಿದೆ. ಪರೀಕ್ಷೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದು ತಿಳಿದು ಬಂದಿದೆ.. ಇದರಿಂದಾಗಿ ಮೂರು ದಿನಗಳ ಕಾಲ ಅಸಹನೀಯ ನೋವು ಅನುಭವಿಸಬೇಕಾಯಿತು.
ಅಷ್ಟೇ ಅಲ್ಲ, ಕಲ್ಲು ರಕ್ತನಾಳದಲ್ಲಿ ಸಿಕ್ಕಿಹಾಕಿಕೊಂಡಿದ್ದು, ಏನಾದರೂ ತಿಂದರೆ ಅಥವಾ ಕುಡಿದರೆ ಅಸಹನೀಯ ನೋವು ಮತ್ತು ವಾಂತಿಯಾಗುತ್ತದೆ ಎಂದು ವಿವರಿಸಿದ್ದಾರೆ. ಸಧ್ಯ ಭಾರತಿ ಸಿಂಗ್ ಪಿತ್ತಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಿನಿಮಾ ಸುದ್ದಿಗಳು, ಲೆಟೆಸ್ಟ್ ಅಪ್‌ಡೆಟ್ಸ್‌ಗಾಗಿ ಈಗಲೇ ನಮ್ಮ Movie Magic ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಿ
Facebook Link – http://surl.li/sinyi
Instagram Link – http://surl.li/sinyq
WhatsApp Channel- http://surl.li/sinza
Share this content:
Post Comment