Loading Now

ಮೆಗಾ ಸ್ಟಾರ್‌ ಮುಡಿಗೆರಿದ ʼಪದ್ಮವಿಭೂಷಣʼ..! ಚಿರು ಅಭಿಮಾನಿಗಳಲ್ಲಿ ಮನೆ ಮಾಡಿದ ಸಂತಸ

ಮೆಗಾ ಸ್ಟಾರ್‌ ಮುಡಿಗೆರಿದ ʼಪದ್ಮವಿಭೂಷಣʼ..! ಚಿರು ಅಭಿಮಾನಿಗಳಲ್ಲಿ ಮನೆ ಮಾಡಿದ ಸಂತಸ

Megastar Chiranjeevi receives Padma Vibhushan : ಮೆಗಾಸ್ಟಾರ್ ಚಿರಂಜೀವಿ ಅವರಿಗೆ 2024 ರ ದೇಶದ ಎರಡನೇ ಅತ್ಯುನ್ನತ ಪದ್ಮವಿಭೂಷಣ ಪ್ರಶಸ್ತಿಯನ್ನು ಕೇಂದ್ರದ ನರೇಂದ್ರ ಮೋದಿ ಸರ್ಕಾರ ಘೋಷಣೆ ಮಾಡಿತ್ತು. ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಪದ್ಮ ಪ್ರಶಸ್ತಿಗಳ ಪ್ರದಾನ ಕಾರ್ಯಕ್ರಮದಲ್ಲಿ, ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಟ ಚಿರಂಜೀವಿ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ ಮಾಡಿದರು.

ಅಕ್ಕಿನೇನಿ ನಾಗೇಶ್ವರ ರಾವ್ ಮತ್ತು ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ನಂತರ ತೆಲುಗು ಸಿನಿ ರಂಗದಿಂದ ಈ ಪ್ರಶಸ್ತಿಯನ್ನು ಪಡೆಯುತ್ತಿರುವ ಮೂರನೇ ವ್ಯಕ್ತಿ ನಟ ಚಿರಂಜೀವಿಯವರು. ಚಿರು ಅವರ ಸಾಧನೆ ಗುರುತಿಸಿ ಕೇಂದ್ರ ಸರ್ಕಾರ ಪದ್ಮವಿಭೂಷಣ ನೀಡಿ ಗೌರವಿಸಿರುವುದು ಮೆಗಾ ಅಭಿಮಾನಿಗಳ ಸಂತಸಕ್ಕೆ ಕಾರಣವಾಗಿದೆ.

ಇನ್ನು ಪದ್ಮ ಪ್ರಶಸ್ತಿ ಕಾರ್ಯಕ್ರಮದಲ್ಲಿ ಚಿರಂಜೀವಿ ಅವರ ಪತ್ನಿ ಸುರೇಖಾ, ಪುತ್ರ ರಾಮ್ ಚರಣ್ ಮತ್ತು ಸೊಸೆ ಉಪಾಸ ಕೂಡ ಭಾಗವಹಿಸಿದ್ದರು. ಇದೇ ವೇಳೆ ಹಿರಿಯ ನಟಿ ವೈಜಯಂತಿ ಮಾಲಾ ಅವರಿಗೂ ರಾಷ್ಟ್ರಪತಿಗಳು ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿದರು.

ಸಧ್ಯ ರಾಜಕೀಯದಿಂದ ದೂರ ಉಳಿದಿರುವ ಚಿರಂಜೀವಿ, ಆಂಧ್ರ ಪ್ರದೇಶ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಟಿಡಿಪಿ ಮತ್ತು ಜನಸೇನಾ ಮೈತ್ರಿಕೂಟದ ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿದ್ದಾರೆ. ಚಿರು ಸಿನಿಮಾ ವಿಚಾರವಾಗಿ ಹೇಳುವುದಾದರೆ, ವಶಿಷ್ಠ ನಿರ್ದೇಶನದ ‘ವಿಶ್ವಂಭರ’ ಸಿನಿಮಾದಲ್ಲಿ ಮೆಗಾಸ್ಟಾರ್‌ ಬ್ಯುಸಿಯಾಗಿದ್ದಾರೆ.

Share this content:

Post Comment

You May Have Missed