ಜ್ಯೋತಿ ರೈ ಅಶ್ಲೀಲ ಖಾಸಗಿ ವಿಡಿಯೋ ವೈರಲ್..! ಕೊನೆಗೂ ಈ ಬಗ್ಗೆ ಮೌನ ಮುರಿದ ನಟಿ
Jyothi Rai viral videos: ಕನ್ನಡ ಕಿರುತೆರೆಯಲ್ಲಿ ಖ್ಯಾತಿ ಗಳಿಸಿದ್ದ ನಟಿ ಜ್ಯೋತಿ ರೈ ಇದೀಗ ಟಾಲಿವುಡ್‌ನಲ್ಲಿ ಮಿಂಚುತ್ತಿದ್ದಾರೆ. ಇದರ ನಡುವೆ ಜ್ಯೋತಿ ಅವರದ್ದು ಎನ್ನಲಾದ ಖಾಸಗಿ ಫೋಟೋಸ್ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇದೀಗ ಈ ಕುರಿತು ನಟಿ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ದೂರು ಸಹ ದಾಖಲಿಸಿದ್ದಾರೆ ಎನ್ನಲಾಗಿದೆ..
ಹೌದು.. ನಟಿ ಜ್ಯೋತಿ ರೈ ಅವರದ್ದು ಎನ್ನಲಾಗುತ್ತಿರುವ ಅಶ್ಲೀಲ ವಿಡಿಯೋಗಳು(Jyothi Rai videos) ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿಸುತ್ತಿವೆ. ವ್ಯಕ್ತಿಯೊಬ್ಬನ ಜೊತೆ ಇರುವ ಖಾಸಗಿ ವಿಡಿಯೋಗಳು ವೈರಲ್ ಆಗುತ್ತಿವೆ. ಇದೀಗ ಈ ಕುರಿತು ನಟಿ ಮಾತನಾಡಿದ್ದು, ತಮ್ಮ ನಕಲಿ ವಿಡಿಯೋ ಹಾಗೂ ಚಿತ್ರಗಳನ್ನು ಹರಿಬಿಡುವ ಮೂಲಕ ತಮ್ಮ ಮಾನಹಾನಿಗೆ ಯತ್ನಿಸಲಾಗುತ್ತಿದೆ ಎಂದಿದ್ದಾರೆ.
ಸದ್ಯ ನಟಿ ಸೈಬರ್ ಕ್ರೈಂ ವಿಭಾಗಕ್ಕೆ ದೂರು ಸಲ್ಲಿಸಿದ್ದು, ಕಳೆದ ಕೆಲವು ದಿನಗಳಿಂದ ನನಗೆ ಸಂದೇಶಗಳು ಬರುತ್ತಿವೆ.. ಇದರಿಂದಾಗಿ ನಾನು ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದೇನೆ. ನನ್ನ ಹಾಗು ನನ್ನ ಕುಟುಂಬದ ಮಾನಹಾನಿ ಮಾಡುವ ಪ್ರಯತ್ನ ನಡೆದಿದೆ. ಈ ತ್ವರಿತವಾಗ ಈ ಬಗ್ಗೆ ಕ್ರಮವನ್ನು ತೆಗೆದುಕೊಳ್ಳುವಂತೆ ವಿನಂತಿಸುತ್ತೇನೆ.. ಎಂದು ಜ್ಯೋತಿ ರೈ ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ.
Share this content:
Post Comment