Loading Now

‘ಡಬಲ್ ಇಸ್ಮಾರ್ಟ್’ ಟೀಸರ್ ರಿಲೀಸ್…! ರಾಮ್‌ – ಸಂಜು ದಾದಾ ಅಬ್ಬರಕ್ಕೆ ಫ್ಯಾನ್ಸ್‌ ಫಿದಾ

‘ಡಬಲ್ ಇಸ್ಮಾರ್ಟ್’ ಟೀಸರ್ ರಿಲೀಸ್…! ರಾಮ್‌ – ಸಂಜು ದಾದಾ ಅಬ್ಬರಕ್ಕೆ ಫ್ಯಾನ್ಸ್‌ ಫಿದಾ

Double iSmart teaser : ಡ್ಯಾಷಿಂಗ್ ಡೈರೆಕ್ಟರ್ ಪೂರಿ ಜಗನ್ನಾಥ್ ಹಾಗೂ ಉಸ್ತಾದ್ ರಾಮ್ ಪೋತಿನೇನಿ ಕಾಂಬಿನೇಷನ್‌ನ ಮುಂಬರುವ ಬಹುನಿರೀಕ್ಷಿತ ‘ಡಬಲ್ ಇಸ್ಮಾರ್ಟ್’. ಇಂದು ಡೈನಾಮಿಕ್ ಸ್ಟಾರ್ ರಾಮ್ ಜನ್ಮದಿನದ ಪ್ರಯುಕ್ತ ಈ ಸಿನಿಮಾ ಟ್ರೇಲರ್‌ ಬಿಡುಗಡೆಯಾಗಿದ್ದು, ಭರ್ಜರಿ ಆಕ್ಷನ್ ಸಿಕ್ವೇನ್ಸ್‌ನಲ್ಲಿ ರಾಮ್ ಅಬ್ಬರಿಸಿದ್ದಾರೆ.

ಮಾಸ್ ಮತ್ತು ಆಕ್ಷನ್-ಪ್ಯಾಕ್ಡ್ ಟೀಸರ್‌ನಲ್ಲಿ ರಾಮ್ ಸಖತ್ ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ಕಾವ್ಯಾ ಥಾಪರ್ ನಾಯಕಿಯಾಗಿ ನಟಿಸಿದ್ದು, ಸಂಜಯ್ ದತ್ ಖಳನಾಯಕನಾಗಿ ಕಾಣಿಸಿಕೊಂಡಿದ್ದಾರೆ. 1.26 ಸೆಕೆಂಡ್ ಇರುವ ಟೀಸರ್‌ನಲ್ಲಿ ರಾಮ್ ಪೋತಿನೇನಿ ಹಾಗೂ ಸಂಜು ಬಾಬು ಜುಗಲ್ಬಂದಿ ನೋಡುಗರಿಗೆ ಕಿಕ್ ಕೊಡ್ತಿದೆ.

‘ಡಬಲ್ ಇಸ್ಮಾರ್ಟ್’ ಟೀಸರ್ ಕ್ಲೈಮ್ಯಾಕ್ಸ್ ಸೀನ್ಸ್ ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಚಿತ್ರ ತೆರೆ ಕಾಣಲಿದೆ. ಮಣಿ ಶರ್ಮಾ ಸಂಗೀತ ಚಿತ್ರಕ್ಕಿದ್ದು, ಕ್ರೇಜಿ ಪ್ಯಾನ್ ಇಂಡಿಯನ್ ಪ್ರಾಜೆಕ್ಟ್ ಡಬಲ್ ಇಸ್ಮಾರ್ಟ್ ಸಿನಿಮಾವನ್ನು ಪುರಿ ಕನೆಕ್ಟ್ ಬ್ಯಾನರ್ ನಡಿ ಪೂರಿ ಜಗನ್ನಾಥ್, ಚಾರ್ಮಿ ಕೌರ್ ನಿರ್ಮಾಣ ಮಾಡಿದ್ದಾರೆ.

Share this content:

Post Comment

You May Have Missed