ಅಯೋಗ್ಯ… ನಿಮ್ಮಂಥವರ ಬಾಯಲ್ಲಿ ರಾಮನ ಹೆಸರೂ ಮಹಾಪಾಪ : ಮೋದಿ ವಿರುದ್ಧ ಗುಡುಗಿದ ಕಿಶೋರ್
Kishore on PM Modi : ನಟ ಕಿಶೋರ್ ಸಾಮಾಜಿಕ ಆಚಾರ ವಿಚಾರಗಳು, ರಾಜಕೀಯ ವಲಯದಲ್ಲಿ ನಡೆಯುವ ಘಟನೆಗಳ ಕುರಿತು ಪ್ರತಿಕ್ರಿಯೆ ನೀಡುವ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ಮತ್ತೊಮ್ಮೆ ಪಿಎಂ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ ನಡೆಸಿರುವ ನಟನ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ..
ನಿಜ ನೀವು ಸಾರ್ವಜನಿಕ ಜೀವನಕ್ಕೇ ಅಲ್ಲ, ಮನುಷ್ಯನಾಗಿರಲೇ ಅಯೋಗ್ಯ.. ನಿಮ್ಮಂಥವರ ಬಾಯಲ್ಲಿ ಮರ್ಯಾದಾ ಪುರುಷೋತ್ತಮ ರಾಮನ ಹೆಸರೂ ಮಹಾಪಾಪ. ಚಿಲ್ಲರೆ ಕಳ್ಳನನ್ನೂ ನಾಚಿಸುವ, ಸತ್ಯ ಸಿದ್ಧಾಂತ ನೈತಿಕತೆ ವ್ಯಕ್ತಿತ್ವ.. ಅದಾವುದೂ ಇಲ್ಲದ ವಿಶ್ವ ಕಂಡ.. ಅತೀ ಸುಳ್ಳುಗಾರ, ಅತೀ ಪುಕ್ಕಲು, ಅತೀ ನಿಕೃಷ್ಠ, ಅತೀ ದುರಹಂಕಾರಿ, ಅತೀ ಕ್ರೂರ, ಅತೀ ಮೂರ್ಖ, ಅತೀ ಸಂವೇದನಾಹೀನ, ಅತೀ ಘನತೆಹೀನ, ಅತೀ ಆತ್ಮರತಿಲೋಲ, ಅತೀ ಜನವಿರೋಧಿ, ಅತೀ ಹೊಲಸು ನಾಲಿಗೆಯ, ಅತೀ ಸಂಕುಚಿತ ದೃಷ್ಟಿಯ, ಅತೀ ಅಪಾಯಕಾರಿ ಅತೀ ಭ್ರಷ್ಟ ನಿರಂಕುಶ ಪ್ರಭುತ್ವವಾದಿ ಎಂದು ಆಧಾರಸಹಿತ ಆ ಮನುಷ್ಯನೇ (?) ಹೇಳಿಬಿಡುತ್ತಾನೆ. ಬೇಕಿದ್ದರೆ ಅವನ ನಡೆ ನುಡಿಯನ್ನು ನೋಡಿ.
10 ವರ್ಷ ಅಧಿಕಾರವಿದ್ದೂ ಮಾಡಿದ ಕೆಲಸದ ಬಗ್ಗೆ, ರೈತರ, ಸೈನಿಕರ, ಮಹಿಳೆಯರ, ಮಕ್ಕಳ, ಆಸ್ಪತ್ರೆ ಕಾಲೇಜುಗಳ ಅಭಿವೃದ್ಧಿಯ ಬಗ್ಗೆ ಮಾತಾಡಲು ಯೋಗ್ಯತೆಯಿಲ್ಲದೇ.. ಬರೀ ಸುಳ್ಳು, ದ್ವೇಷ ಕಾರುವುದು..
ಮುಸ್ಲಿಂ ತೆರಿಗೆಯಂತೆ , ನುಸುಳುಕೋರರಂತೆ, ಪಾಕೀಸ್ಥಾನವಂತೆ, ರೂಮು ಕಿತ್ಕೊತಾರಂತೆ, ಎಮ್ಮೆ ಕಿತ್ಕೊತಾರಂತೆ, ಸೈಕಲ್ ಕಿತ್ಕೊತಾರಂತೆ, ವೋಟು ಜಿಹಾದ್ ಅಂತೆ ಮಂದಿರಕ್ಕೆ ಬೀಗವಂತೆ.
ಬರೀ ತಲೆಬುಡವಿಲ್ಲದ ಮಾತುಗಳು, ಮುಸ್ಲಿಂ ಬಯೋತ್ಪಾದಕರು ಇಸ್ಲಾಂನ ಮಾನ ಕಳೆದಂತೆ ಅಧಿಕಾರಕ್ಕಾಗಿ ಹಿಂದೂ ಬಣ್ಣ ಬಳಿದುಕೊಂಡ ಈ ಢೋಂಗಿ ಮನುಷ್ಯ ಹಿಂದೂ ಧರ್ಮದ ಮಾನ ವಿಶ್ವದಾದ್ಯಂತ ಮೂರು ಕಾಸಿಗೆ ಹರಾಜು ಹಾಕಿಬಿಟ್ಟ.. ಎಂದು ನರೇಂದ್ರ ಮೋದಿ ವಿರುದ್ಧ ನಟ ಕಿಶೋರ್ ವಾಗ್ದಾಳಿ ನಡೆಸಿದ್ದಾರೆ.
Share this content:
Post Comment