Mon. Aug 11th, 2025

Ashwini Puneeth Rajkumar : ಸೋಷಿಯಲ್‌ ಮೀಡಿಯಾದಲ್ಲಿ ಅಶ್ವಿನಿ ಪುನೀತ್​ ರಾಜ್​ಕುಮಾರ್ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಸಂಚಲನ ಸೃಷ್ಟಿಸುತ್ತಿದೆ. ಗಜಪಡೆ ಎಂಬ ದರ್ಶನ್‌ ಅಭಿಮಾನಿ ಎಂದು ಹೇಳಿಕೊಂಡಿರುವ ಕಿಡಿಗೇಡಿಯ ಕೃತ್ಯಕ್ಕೆ ದಚ್ಚು, ಕಿಚ್ಚ ಮತ್ತು ಅಪ್ಪು ಅಭಿಮಾನಿಗಳು ಕಿಡಿಕಾರುತ್ತಿದ್ದಾರೆ.

ಹೌದು.. ಆರ್‌ಸಿಬಿ ಸೋಲಿಗೆ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರೇ ಕಾರಣ. ʼಶುಭ ಕಾರ್ಯಕ್ಕೆ ಮುತ್ತೈದೆಯರನ್ನು ಕರೆಯಬೇಕು, ಗಂಡ ಸತ್ತವರನ್ನ ಅಲ್ಲʼ ಎಂದು ಬರೆದು ಅಪ್ಪು ಮಡದಿಯ ವಿರುದ್ಧ ಕಿಡಿಗೇಡಿಗಳು ಪೋಸ್ಟ್‌ ಹಂಚಿಕೊಂಡಿದ್ದರು. ಈ ಕುರಿತು ಇದೀಗ ಬೆಂಗಳೂರು ನಗರ ಕಮಿಷನರ್‌ ಅವರಿಗೆ ಪುನೀತ್‌ ಅವರ ಅಭಿಮಾನಿಗಳು ದೂರು ನೀಡಿದ್ದಾರೆ.

ದೂರಿನಲ್ಲಿ, ಕಳೆದ ಮಾರ್ಚ್ ತಿಂಗಳ 19ನೇ ತಾರೀಕಿನಂದು ಬೆಂಗಳೂರಿನ ಆರ್‌ಸಿಬಿ ತಂಡದ ಜೆರ್ಸಿ ಉದ್ಘಾಟನೆ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾ‌ರ್ ಅವರನ್ನು ಆಹ್ವಾನಿಸಿದ್ದರು. ಅದರಂತೆ ಅಶ್ವಿನಿ ಮೇಡಮ್ ಅವರು ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಾದ ನಂತರ ಐಪಿಎಲ್ ಪ್ರಾರಂಭವಾಗಿ ಆರ್‌ಸಿಬಿ ತಂಡವು ಕೆಲ ಪಂದ್ಯಗಳಲ್ಲಿ ಸೋತ ಕಾರಣ ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ನಲ್ಲಿ “ಗಜ ಪಡೆ” ಎಂಬ ನಕಲಿ ಖಾತೆ ಸೃಷ್ಟಿಸಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಆ ಕಾರ್ಯಕ್ರಮಕ್ಕೆ ಬಂದದ್ದೆ ಆರ್‌ಸಿಬಿ ತಂಡದ ಸೋಲಿಗೆ ಕಾರಣ ಎಂದು ಅಶ್ವಿನಿ ಮೇಡಂ ಅವರನ್ನು ಹೊಣೆ ಮಾಡಿ ಅವರನ್ನು ಕೆಟ್ಟದಾಗಿ ನಿಂದಿಸಿ ಪೋಸ್ಟ್ ಮಾಡಿರುತ್ತಾನೆ.

ಇದಾದ ನಂತರ ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದಾಗ ಆ ನಕಲಿ ಖಾತೆಯ ಹೆಸರನ್ನು “ಸುದೀಪ್ ಅಭಿಮಾನಿ” ಎಂದು ಬದಲಾಯಿಸಿ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಗಳು ಹಾಗೂ ಸುದೀಪ್ ಅವರ ಅಭಿಮಾನಿಗಳ ನಡುವೆ ಭಿನ್ನಾಭಿಪ್ರಾಯ ಉಂಟಾಗುವಂತೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಶಾಂತಿ ಸೃಷ್ಟಿಸಿರುತ್ತಾನೆ ಹಾಗೂ ಅಶ್ವಿನಿ ಪುನೀತ್ ರಾಜ್ ಕುಮಾರ್ ಮತ್ತು ಸುದೀಪ್ ಅವರಿಗೆ ಅವಮಾನ ಮಾಡಿರುತ್ತಾನೆ ಈ ಘಟನೆಯಿಂದ ಕರ್ನಾಟಕದ ರಾಜವಂಶದ ಅಭಿಮಾನಿಗಳಿಗೆ ತುಂಬಾ ನೋವು ಉಂಟಾಗಿರುತ್ತದೆ ಹಾಗಾಗಿ ಅವನನ್ನು ಶೀಘ್ರದಲ್ಲೇ ಬಂಧಿಸಿ ಅವನಿಗೆ ತಕ್ಕ ಶಿಕ್ಷೆ ನೀಡಬೇಕಾಗಿ ಕೋರುತ್ತಿದ್ದೇವೆ ಎಂದು ಉಲ್ಲೇಖಿಸಲಾಗಿದೆ.

Share this content:

Leave a Reply

Your email address will not be published. Required fields are marked *